ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಆಗಸ್ಟ್ 11 ರಿಂದ ಶ್ರೀ ಕಾಶಿ ವಿಶ್ವನಾಥ ಧಾಮದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮಂದಿರದ ಆಡಳಿತ ಮಂಡಳಿ ಘೋಷಿಸಿದೆ.
ಈ ನಿರ್ಧಾರವನ್ನು ಧಾಮದ ಪಾವಿತ್ರ‍್ಯತೆ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ತೆಗೆದುಕೊಳ್ಳಲಾಗಿದೆ. ಆಡಳಿತ ಮಂಡಳಿಯು ಧಾಮದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದೆ.
ಮಂದಿರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವ ಭೂಷಣ್ ಮಿಶ್ರಾ ಮಾತನಾಡಿ, ಕಾಶಿ ವಿಶ್ವನಾಥ ಧಾಮ ಕೇವಲ ಆಧ್ಯಾತ್ಮಿಕ ಕೇಂದ್ರವಾಗಿರದೆ, ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಮಾದರಿಯಾಗಬೇಕು. ಈ ಉಪಕ್ರಮವು ಪವಿತ್ರ ವಾತಾವರಣವನ್ನು ಹೊಂದಿರುವ ಧಾಮವನ್ನು ಮಾಲಿನ್ಯ ಮುಕ್ತವಾಗಿರಿಸುವ ಗುರಿಯನ್ನು ಹೊಂದಿದೆ.