ಜಿ-20 ಸಮಾವೇಶದಲ್ಲಿ ನಡೆಯಿತು ಭಾರತ-ಚೀನಾ ಮಹತ್ವದ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂಡೋನೇಷ್ಯಾದ ಬಾಲಿಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಗುರುವಾರ ಮಾತುಕತೆ ನಡೆಸಿದರು.
ಒಂದು ಗಂಟೆ ನಡೆದ ಮಾತುಕತೆಯಲ್ಲಿ ಪೂರ್ವ ಲಡಾಖ್​ನ ಗಡಿ ವಿವಾದ, ಭಾರತೀಯ ವಿದ್ಯಾರ್ಥಿಗಳನ್ನು ಚೀನಾಗೆ ಕಳುಹಿಸುವ ವಿಷಯ ಮತ್ತು ಎರಡೂ ದೇಶಗಳ ನಡುವೆ ನೇರವಿಮಾನ ಸಂಪರ್ಕ ಆರಂಭಿಸುವ ಬಗ್ಗೆ ಚರ್ಚಿಸಲಾಯಿತು.
ಜಿ-20 ಸಮಾವೇಶದ ಅಂಗವಾಗಿ ಜಿ-20 ದೇಶಗಳ ವಿದೇಶಾಂಗ ಸಚಿವರ ಮಧ್ಯೆ ಮಾತುಕತೆಗಳು ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ಭಾರತ ಹಾಗೂ ಚೀನಾ ಸಭೆ ನಡೆದಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ ಜೈಶಂಕರ್, ಗಡಿವಿವಾದಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಬಾಕಿ ಉಳಿದ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!