ಬೇಲೆಕೇರಿ ಅದಿರು ನಾಪತ್ತೆ ಕೇಸ್ ನಲ್ಲಿ ಜೈಲುವಾಸ: ಸತೀಶ್ ಸೈಲ್ ಶಾಸಕ ಸ್ಥಾನಕ್ಕೆ ಕುತ್ತು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ಜೈಲು ಶಿಕ್ಷೆ ಪ್ರಕಟವಾಗಿದ್ದು, ಹೀಗಾಗಿ ಶಾಸಕ ಸ್ಥಾನ ಅನರ್ಹ ಭೀತಿ ಶುರುವಾಗಿದೆ.

ಪ್ರಕರಣದ ಮೊದಲ ಕೇಸ್ ನಲ್ಲಿ ಶಾಸಕ ಸತೀಶ್ ಸೈಲ್ ಗೆ 5 ವರ್ಷ ಜೈಲು ಶಿಕ್ಷೆ, 2ನೇ ಕೇಸ್ ನಲ್ಲಿ 3 ವರ್ಷ ಜೈಲು ಶಿಕ್ಷೆ, 3ನೇ ಕೇಸ್ ನಲ್ಲಿ 7 ವರ್ಷ, ನಾಲ್ಕನೇ ಕೇಸ್ ನಲ್ಲಿ 5 ವರ್ಷ, 5ನೇ ಕೇಸ್ ನಲ್ಲಿ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸತೀಶ್ ಸೈಲ್ ಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಖಚಿತವಾಗಿದ್ದು, ಶಾಸಕ ಸ್ಥಾನಕ್ಕೆ ಕುತ್ತು ತಂದಿದೆ.

ನಿಯಮಗಳ ಪ್ರಕಾರ ಜನಪ್ರತಿನಿಧಿಗಳಿಗೆ ಯಾವುದೇ ಪ್ರಕರಣದಲ್ಲಿ ಎರಡು ವರ್ಷಕ್ಕಿಂತ ಹೆಚ್ಚು ಕಾಲ ಜೈಲು ಶಿಕ್ಷೆಯಾದರೆ ಅವರನ್ನು ಅನರ್ಹಗೊಳಿಸಲಾಗುತ್ತದೆ. ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!