ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ: GRAP-III ನಿರ್ಬಂಧ ತೆರವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು‌ ತೆರವುಗೊಳಿಸಲಾಗಿದೆ. ಜೊತೆಗೆ BS-III ಪೆಟ್ರೋಲ್ ಮತ್ತು BS-IV ಡೀಸೆಲ್ ವಾಹನಗಳ ಓಡಾಟದ ಮೇಲಿನ ನಿರ್ಬಂಧಗಳನ್ನೂ ಸಡಿಲಗೊಳಿಸಲಾಗಿದೆ.

ಭಾನುವಾರ (ಇಂದು) ದೆಹಲಿ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ಸುಧಾರಣೆ ಕಂಡುಬಂದಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ (CPCB) ಅಂಕಿ – ಅಂಶಗಳ ಪ್ರಕಾರ, ಮಧ್ಯಾಹ್ನ 2 ಗಂಟೆ ವೇಳೆ ದೆಹಲಿಯ ಎಕ್ಯೂಐ 348 ಆಗಿತ್ತು, ಇದು ಮಧ್ಯಾಹ್ನ 3 ಗಂಟೆ ವೇಳೆಗೆ 343 ಹಾಗೂ ಸಂಜೆ 5 ಗಂಟೆ ಸುಮಾರಿಗೆ 335 ದಾಖಲಾಗಿದೆ. ಇದು ಸುಧಾರಣೆಯ ಸ್ಪಷ್ಟ ಸಂಕೇತ ಎಂದು ವರದಿ ಹೇಳಿದೆ.

ಈ ಸಕಾರಾತ್ಮಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎನ್‌ಸಿಆರ್‌ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ. ತೆ

ಹಂತ-1, ಹಂತ – 2ರ ನಿರ್ಬಂಧಗಳು ಮುಂದುವರಿಯಲಿವೆ. ಇದರೊಂದಿಗೆ ಕೈಗಾರಿಕಾ ಘಟಕಗಳು ಹಾಗೂ ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಿಸಲಾದ ನಿರ್ಬಂಧಗಳು ಮುಂದಿನ ಆದೇಶದವರೆಗೆ ಮುಂದುವರಿಯಲಿವೆ ಎಂದು ಸರ್ಕಾರ ಹೇಳಿದೆ ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!