ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ .
ಮಾತಿನಲ್ಲಿ ತೊದಲುವಿಕೆ, ಕೈನಲ್ಲಿ ದುರ್ಬಲತೆ ಕಾಣಿಸಿಕೊಂಡ ಕಾರಣ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು.
ಎರಡು ದಿನ ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.
ಜಯನಗರ ಅಪೋಲೋ ಆಸ್ಪತ್ರೆಯ ನ್ಯೂರಾಲಜಿ ವಿಭಾಗದ ಸೀನಿಯರ್ ಕನ್ಸಲ್‌ಟೆಂಟ್ ಸತೀಶ್ ಚಂದ್ರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು.