ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆರೋಗ್ಯದಲ್ಲಿ ಸುಧಾರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (AIIMS) ಮೂಲಗಳು ತಿಳಿಸಿವೆ.
ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಏಮ್ಸ್​​ಗೆ ದಾಖಲಿಸಲಾಗಿತ್ತು. ಸಚಿವರ ಆರೋಗ್ಯ ಚೇತರಿಸಿದೆ. ಹೀಗಾಗಿ ಬುಧವಾರ ವೈದ್ಯರು ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳು ಹೇಳಿವೆ.
ಸೋಮವಾರ ಬೆಳಿಗ್ಗೆಯಿಂದಲೇ ನಿರ್ಮಲಾ ಸೀತಾರಾಮನ್ ಅಸ್ವಸ್ಥಗೊಂಡಿದ್ದರು. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅವರನ್ನು ಏಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಏಮ್ಸ್ ಬಹಿರಂಗಪಡಿಸಿರಲಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!