ಹೊಸದಿಗಂತ ಡಿಜಿಟಲ್ ಡೆಸ್ಕ್
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವರ ಮಾಜಿ ಪತ್ನಿ ರೆಹಮ್ ಖಾನ್ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನದ ಮಟ್ಟಿಗೆ ಇಮ್ರಾನ್ ಖಾನ್ ಈಗ ಇತಿಹಾಸ, ಅವರು ಸೃಷ್ಟಿಸಿರುವ ಅವ್ಯವಸ್ಥೆ ಶುಚಿಗೊಳಿಸುವತ್ತ ಜನರು ಗಮನ ಹರಿಸಬೇಕು ಎಂದು ಹೇಳಿದ್ದಾರೆ.
ಇತ್ತ ಭಾನುವಾರ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯ ಅಗ್ನಿಪರೀಕ್ಷೆ, ಇದೆ ವೇಳೆ ರೆಹಮ್ ಖಾನ್ ವಾಗ್ದಾಳಿ ನಡೆಸಿದ್ದು, ಖಾನ್ ಅನ್ನು ಇಕ್ಕಟಿಗೆ ಸಿಲುಕಿಸಿದೆ.
ಇಮ್ರಾನ್ ಖಾನ್ ವಿರುದ್ಧ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ ರೆಹಮ್ ಖಾನ್ , ಇಮ್ರಾನ್ ಈಗ ಇತಿಹಾಸ, ಪಾಕಿಸ್ತಾನದಲ್ಲಿನ ಅವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ನಾವು ಎಲ್ಲರೂ ಒಟ್ಟಾಗಿ ಗಮನಹರಿಸಬೇಕು ಎಂದು ನಾನು ಭಾವಿಸುತ್ತೇನೆ. ಅವರ ‘ಬುದ್ಧಿವಂತಿಕೆ ಮತ್ತು ಸಾಮರ್ಥ್ಯ’ ಅತೀ ತೀಕ್ಷ್ಣ ಎಂದು ಅವರು ಟೀಕಿಸಿದ್ದಾರೆ.
ಇನ್ನು ಪಾಕಿಸ್ತಾನದ ಪ್ರಧಾನಿ ಹೇಳಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರೆಹಮ್ ಖಾನ್, ಹೌದು, ನೀವು ಪ್ರಧಾನಿಯಾಗಿಲ್ಲದಿದ್ದಾಗ ಪಾಕಿಸ್ತಾನ ಅದ್ಭುತವಾಗಿರುತ್ತದೆ ಎಂದು ಟೀಕಿಸಿದ್ದಾರೆ.