ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ಖುರ್ಚಿ ಅಲುಗಾಡುತ್ತಿದ್ದು, ತಮ್ಮದೇ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ 24 ಸದಸ್ಯರು ಖಾನ್ ವಿರುದ್ಧ ತಿರುಗಿ ಬಿದ್ದಿದ್ದು, ಪ್ರತಿಪಕ್ಷಗಳು ಮಂಡಿಸಲು ಉದ್ದೇಶಿಸಿರುವ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸಲು ಮುಂದಾಗಿದ್ದಾರೆ.
ಪಾಕ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅವಿಶ್ವಾಸ ನಿರ್ಣಯ ಮಂಡಿಸಲು ಉದ್ದೇಶಿಸಿದೆ. ಇದಕ್ಕೆ ಬೆಂಬಲ ನೀಡಲು ಇಮ್ರಾನ್ ಖಾನ್ ಪಕ್ಷದ ಸದಸ್ಯರೇ ಬೆಂಬಲಿಸಲು ಮುಂದಾಗಿದ್ದಾರೆ
ಈ ಸಂಬಂಧ ಈಗಾಗಲೇ ಪ್ರತಿಪಕ್ಷಗಳ ಅಂದಾಜು 100 ಸದಸ್ಯರು ಮನವಿಯನ್ನೂ ಸಲ್ಲಿಸಿದ್ದು, ಪಾಕಿಸ್ತಾನದ ಉಂಟಾದ ಆರ್ಥಿಕ ಬಿಕ್ಕಟ್ಟು ಹಾಗೂ ಹಣದುಬ್ಬರಕ್ಕೆ ಇಮ್ರಾನ್ ಖಾನ್ ಕಾರಣ ಎಂದು ಪ್ರತಿಪಕ್ಷಗಳು ವಾದವಾಗಿದೆ.
ಈ ಅವಿಶ್ವಾಸ ನಿರ್ಣಯವು ಮಾ.28ರಂದು ಸಂಸತ್ತಿನ ಮುಂದೆ ಬರುವ ಸಾಧ್ಯತೆ ಇದ್ದು, ಇಮ್ರಾನ್ ಖಾನ್ ಪಕ್ಷದ ಸದಸ್ಯರೇ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಬೆಂಬಲಿಸಲು ತೀರ್ಮಾನಿಸಿದ್ದಾರೆ.
ಹೀಗಾಗಿ ಖಾನ್ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ.