ಅತ್ತ ವಿಚಾರಣೆಗಾಗಿ ಕೋರ್ಟ್​​ಗೆ ತೆರಳಿದ ಇಮ್ರಾನ್ ಖಾನ್: ಇತ್ತ ಮನೆಗೆ ನುಗ್ಗಿದ ಪಾಕ್ ಪೊಲೀಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೋಶಾಖಾನ (Toshakhana) ಪ್ರಕರಣದಲ್ಲಿ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಕೋರ್ಟ್‌ನತ್ತ ತೆರಳುತ್ತಿದ್ದಂತೆ ಇತ್ತ ಅವರ ಮನೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ಮನೆ ಹೊರಗೆ ಇರಿಸಿದ್ದ ಬ್ಯಾರಿಕೇಡ್‌ಗಳನ್ನು ತೆಗೆದು ಪೊಲೀಸರು ಹೊರ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿ ಇಮ್ರಾನ್ ಖಾನ್ ಪತ್ನಿ ಬುಶ್ರಾ ಬೇಗಂ (Bushra Begum) ಇದ್ದರು.
ಪೊಲೀಸ್ ಕಾರ್ಯಾಚರಣೆಯ ಸಂದರ್ಭದಲ್ಲಿ, ಕನಿಷ್ಠ 10 ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. 30 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ .

ಪೊಲೀಸರ ವರ್ತನೆಗೆ ಕಿಡಿಕಾರಿ ಇಮ್ರಾನ್ ಖಾನ್ ಟ್ವೀಟ್ (Tweet) ಮಾಡಿದ್ದಾರೆ. ನನ್ನ ಪತ್ನಿ ಒಬ್ಬಳೇ ಇರುವ ಸಂದರ್ಭದಲ್ಲಿ ಪೊಲೀಸರು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಯಾವ ಕಾನೂನಿನ ಅಡಿಯಲ್ಲಿ ಅವರು ಈ ರೀತಿ ಮಾಡುತ್ತಿದ್ದಾರೆ? ಎಂದು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗವು (Election Commission) ಸಲ್ಲಿಸಿದ್ದ ದೂರಿನ ವಿಚಾರಣೆಗೆ ಹಾಜರಾಗಲು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಾಫರ್ ಇಕ್ಬಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗುವಂತೆ ಪಾಕಿಸ್ತಾನದ ತೇಹ್ರಿಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರಾಗಿರುವ ಇಮ್ರಾನ್ ಖಾನ್ ಅವರಿಗೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!