Wednesday, August 17, 2022

Latest Posts

6 ತಿಂಗಳಲ್ಲಿ 13 ಬೈಕ್ ಕಳ್ಳತನ ಮಾಡಿದ ಆರೋಪಿ ಬಂಧನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬೀದರ

ಬೀದರ ಜಿಲ್ಲೆಯ ಬೀದರ ನೂತನ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳುಗಳಿಂದ ಮೋಟರ್ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬೀದರ ನೂತನ ನಗರ ಠಾಣೆ ಪಿ.ಎಸ್.ಐ. ಶ್ರೀಮತಿ ತಸ್ಲೀಮ ಅವರ ನೇತೃತ್ವದ ತಂಡ ಯಶಸ್ವಿಯಾಗಿದೆ. ಅಲ್ಲದೇ 6 ತಿಂಗಳಲ್ಲಿ ಕಳ್ಳತನ ಮಾಡಿದ ಒಟ್ಟು 13 ಮೊಟರ್ ಸೈಕಲ್ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಬೀದರ ನೂತನ ನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಚರಣೆ ಮೆಚ್ಚುಗೆ ವ್ಯಕ್ತಪಡಿಸಿದ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಅವರು ಬಹುಮಾನ ಘೋಷಣೆ ಮಾಡಿದ್ದಾರೆ.
ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಬೀದರ ಡಿ.ವೈ.ಎಸ್.ಪಿ. ಕೆ.ಎಂ. ಸತೀಶ, ನೂತನ ನಗರ ಠಾಣೆ ಸಿಪಿಐ ಕಪೀಲದೇವ ಅವರ ಮಾರ್ಗದರ್ಶನದಲ್ಲಿ ನೂತನ ನಗರ ಠಾಣೆ ಪಿ.ಎಸ್.ಐ. ಶ್ರೀಮತಿ ತಸ್ಲೀಮ ಹಾಗೂ ಸಿಬ್ಬಂದಿಗಳಾದ ಮೋಹನರಾಜ, ವೀರಣ್ಣ, ಪ್ರಕಾಶ, ಶಿವಾನಂದ, ಜಾರ್ಜ, ವಿಯಜಯಕುಮಾರ, ವಿಶ್ವನಾಥ, ಶೇಖ ಮೋದಿನ, ಸುನೀಲ ರಾಠೋಡ ಅವರು ಪಾಲ್ಗೊಂಡಿದ್ದರು.
ಈ ಕುರಿತು ಬೀದರ ನೂತನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!