ಕೆಲವೇ ಕ್ಷಣಗಳಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಿಗೂಢತೆ ಬಯಲು: ಹಂತಕರು ಯಾರು???

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಾದ್ಯಂತ ತಲ್ಲಣ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಬೇಧಿಸುವಲ್ಲಿ ಪೊಲೀಸ್ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

ಪ್ರಕರಣದ ಪ್ರಮುಖ ಆರೋಪಿಗಳ ಬಂಧನವಾಗಿದ್ದು, ದ.ಕ ಜಿಲ್ಲಾ ಪೊಲಿಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಬಂಧಿತರ ಬಗ್ಗೆ ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಲಿದ್ದು, ಇಂದು ಮಧ್ಯಾಹ್ನ 12.30 ಕ್ಕೆ ಮಂಗಳೂರಿನ ಎಸ್.ಪಿ. ಕಚೇರಿ ಯಲ್ಲಿ ಪೋಲೀಸ್ ಹಿರಿಯ ಅಧಿಕಾರಿಗಳು ಪತ್ರಿಕಾಗೋಷ್ಠಿ ಕರೆದು ವಿವರ ನೀಡಲಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸ್ ಇಲಾಖೆ ಪ್ರಕರಣದ ವಿಸ್ತೃತ ಮಾಹಿತಿ ನೀಡುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!