ಟಾಟಾ ಏಸ್ ವಾಹನದಲ್ಲಿ ದನಗಳ ಅಕ್ರಮ ಸಾಗಾಟ: ಆರೋಪಿ ಬಂಧನ

ಹೊಸ ದಿಗಂತ ವರದಿ, ಅಂಕೋಲಾ:

ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 4 ದನಗಳನ್ನು ಅಂಕೋಲಾ ಪೊಲೀಸರು ತಾಲೂಕಿನ ಮೊಗಟಾ ಹೈಸ್ಕೂಲ್ ಬಳಿ ದಾಳಿ ನಡೆಸಿ ರಕ್ಷಣೆ ಮಾಡಿದ್ದು ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು ಇಬ್ಬರು ಓಡಿ ತಪ್ಪಿಸಿಕೊಂಡಿದ್ದಾರೆ.
ಕಲಘಟಗಿ ದೇವಿಕೊಪ್ಪ ನಿವಾಸಿ ಚನ್ನಬಸು ನಾಗಪ್ಪ ಬಿಚ್ಚುಗತ್ತಿ (33) ಬಂಧಿತ ಆರೋಪಿಯಾಗಿದ್ದು ಪಕೀರೇಶ ಕಳಸೂರು ಮತ್ತು ಯಮುನಪ್ಪ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.
ಆರೋಪಿತರು ಕಲಘಟಗಿಯಿಂದ ಹಿಲ್ಲೂರು ಮಾರ್ಗವಾಗಿ ದನಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಮೊಗಟಾ ಹೈಸ್ಕೂಲ್ ಬಳಿ ಪಿ.ಎಸ್. ಐ ಮಹಾಂತೇಶ ವಾಲ್ಮೀಕಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಸುಮಾರು 39 ಸಾವಿರ ಮೌಲ್ಯದ 4 ದನಗಳನ್ನು ಮತ್ತು 1 ಲಕ್ಷ ರೂಪಾಯಿ ಮೌಲ್ಯದ ಟಾಟಾ ಏಸ್ ವಾಹನ ವಶಪಡಿಸಿಕೊಂಡಿದ್ದಾರೆ.
ಆರೋಪಿತರು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ಸಾಗಿಸುತ್ತಿರುವುದಾಗಿ ತಿಳಿದು ಬಂದಿದ್ದು ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿ ನಾಪತ್ತೆ ಆಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!