ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 2025ನ 65ನೇ ಪಂದ್ಯದಲ್ಲಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ಜಿತೇಶ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 20 ಓವರ್ಗಳಲ್ಲಿ 231 ರನ್ ಕಲೆಹಾಕಿತು. 232 ರನ್ಗಳ ಕಠಿಣ ಗುರಿ ಬೆನ್ನತ್ತಿದ ಆರ್ಸಿಬಿ 19.5 ಓವರ್ಗಳಲ್ಲಿ 189 ರನ್ಗಳಿಸಿ ಸೋಲನುಭವಿಸಿದೆ.
ಈ ಸೋಲಿನ ಬಳಿಕ ಮಾತನಾಡಿದ ಆರ್ಸಿಬಿ ತಂಡದ ನಾಯಕ ಜಿತೇಶ್ ಶರ್ಮಾ, ಈ ಪಂದ್ಯದಲ್ಲಿ ನಾವು 20-30 ಹೆಚ್ಚುವರಿ ರನ್ಗಳನ್ನು ನೀಡಿದ್ದು ನಮ್ಮ ಪಾಲಿಗೆ ದುಬಾರಿಯಾಯಿತು. ಸನ್ರೈಸರ್ಸ್ ಹೈದರಾಬಾದ್ ಬ್ಯಾಟರ್ಗಳಿಗೆ ಹೋಲಿಸಿದರೆ, ನಮ್ಮ ಬ್ಯಾಟಿಂಗ್ನಲ್ಲಿ ತೀವ್ರತೆ ಇರಲಿಲ್ಲ ಎಂಬುದು ನನ್ನ ಭಾವನೆ. .ಒಂದಾರ್ಥದಲ್ಲಿ ನಾವು ಈ ಪಂದ್ಯವನ್ನು ಸೋತಿದ್ದು ಒಳ್ಳೆಯದೇ ಆಯ್ತು. ಏಕೆಂದರೆ ಚೇಸಿಂಗ್ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕಿದೆ. ಈ ತಪ್ಪುಗಳನ್ನು ತಿದ್ದಿ ಮುಂಬರುವ ಪಂದ್ಯಗಳಲ್ಲಿ ಉತ್ತಮ ರೀತಿಯಲ್ಲಿ ಆಡುತ್ತೇವೆ ಎಂಬ ವಿಶ್ವಾಸವಿದೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.