Wednesday, July 6, 2022

Latest Posts

ಮುಂಬರುವ ಎಲ್ಲ ಚುನಾವಣೆಗಳಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ: ವಿಜಯ ಶರ್ಮಾ

ಹೊಸ ದಿಗಂತ ವರದಿ, ಬೀದರ್:

ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ನಡೆಯಲಿರುವ ತಾಲೂಕಾ ಪಂಚಾಯತ, ಜಿಲ್ಲಾ ಪಂಚಾಯತ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಆಮ್ ಆದ್ಮಿ ಪಾರ್ಟಿ (ಎ.ಎ.ಪಿ.) ಸ್ಪರ್ಧಿಸಲಿದೆ ಎಂದು ಆಪ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ವಿಜಯ ಶರ್ಮಾ  ಹೇಳಿದರು.

ಅವರು  ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ದಿಲ್ಲಿ ಹಾಗೂ ಪಂಜಾಬ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕ ರಾಜ್ಯದ ಜನತೆಗೆ ಮೂಲಭೂತ ಸೌಲಭ್ಯಗಳು ಕಲ್ಪಿಸಲು ಪ್ರಥಮಾದ್ಯತೆ ನೀಡಲಾಗುವುದು ಎಂದರು.

ಆಮ್ ಆದ್ಮಿ ಪಾರ್ಟಿ ದಿಲ್ಲಿ ಮತ್ತು ಪಂಜಾಬ ರಾಜ್ಯಗಳಲ್ಲಿ ಭೃಷ್ಠಾಚಾರ ಮುಕ್ತ ಆಡಳಿತ ನೀಡುತ್ತಿದೆ. ಪಕ್ಷ ಅಧಿಕಾರಕ್ಕೆ ಬಂದರೆ, ದಿಲ್ಲಿ ಮತ್ತು ಪಂಜಾಬ ಮಾದರಿಯಲ್ಲಿ ಆಡಳಿತ ನೀಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಮುಖಂಡರಾದ ದೀಪಕ ಅವರು ಸೇರಿದಂತೆ ಇತರೆ ಪದಾಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss