ಆಗಸ್ಟ್ ನಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆ: ಸಚಿವ ಬಿ.ಸಿ. ನಾಗೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆಗಸ್ಟ್‌ನಲ್ಲಿ ಪೂರಕ ಪರೀಕ್ಷೆ ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು.
ಶನಿವಾರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ.ಪೂ. ಶಿಕ್ಷಣ ಇಲಾಖೆಯ ಕಚೇರಿಯಲ್ಲಿ 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಿ ಮಾತನಾಡಿದ ಅವರು, ‘2020ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ. 61.80ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ 61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಫಲಿತಾಂಶದಲ್ಲಿ ಉತ್ತೀರ್ಣ ಪ್ರಮಾಣ 0.08ರಷ್ಟು ಏರಿಕೆಯಾಗಿದೆ’ ಎಂದು ಸಚಿವರು ಮಾಹಿತಿ ನೀಡಿದರು.
‘ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿಯನ್ನು ಪಡೆಯಲು ಇಂದಿನಿಂದಲೇ ಅವಕಾಶ ಕಲ್ಪಿಸಲಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಫಲಿತಾಂಶಕ್ಕೆ ಕಾಯದೇ, ಪೂರಕ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸುವುದು ಉತ್ತಮ’ ಎಂದು ಸಚಿವರು ಸಲಹೆ ನೀಡಿದರು.
‘ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಲಾಗುತ್ತದೆ. ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ನಡೆಯಲಿವೆ’ ಎಂದು ಸಚಿವರು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!