ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಶಿವಮೊಗ್ಗ :
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಭವ್ಯ ಮಂದಿರ ನಿರ್ಮಾಣವಾಗುತ್ತಿರುವುದು ಸಮಸ್ತ ಭಾರತೀಯರ ಕನಸು ನನಸಾದಂತಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಪ್ರಭಾಕರ ರಾಯ್ಕರ್ ಹೇಳಿದರು.
ಸೊರಬ ಪಟ್ಟಣದ ಶ್ರೀ ರಾಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗೋ ಸಂರಕ್ಷಣಾ ಹೋರಾಟ ಸಮಿತಿಯಿಂದ 16ನೇ ವರ್ಷದ ಗಣೇಶೋತ್ಸವ ಅಂಗವಾಗಿ ಭಾನುವಾರ ಸಂಜೆ ಹಮ್ಮಿಕೊಂಡ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಗೋ ಸಂರಕ್ಷಣಾ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಜಗತ್ತಿನಲ್ಲಿ ಎಲ್ಲೂ ಇಲ್ಲದಷ್ಟು ಗೋ ಸಂತತಿ ನಮ್ಮ ದೇಶದಲ್ಲಿದ್ದು, ದೇಶದಲ್ಲಿ ಸುಮಾರು 30 ಸಾವಿರ ಕೋಟಿ ಗೋವುಗಳಿಗೆ ಆಶ್ರಯ ನೀಡಲಾಗುತ್ತಿದೆ. ಗೋ ರಕ್ಷಣೆ ನಮ್ಮ ಸಂಸ್ಕೃತಿಯಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಗೌರವ ನೀಡಬೇಕು ಎಂದರು.
ಗಣೇಶೋತ್ಸವದ ಪೂಜಾ ವಿಧಿವಿಧಾನಗಳನ್ನು ಅರುಣ್ಶಾಸ್ತ್ರಿ ಹೊಂಡದ ಮಠ ಮರೂರು ನಿರ್ವಹಿಸಿದರು. ಸಮಿತಿಯ ಕಾರ್ಯದರ್ಶಿ ವೀರೇಂದ್ರ ಗೌಡ, ಶರತ್ ಸ್ವಾಮಿ, ಎಂ.ಬಿ. ನಾಗರಾಜ ಗೌಡ, ಅಭಿಷೇಕ್, ಅನಿಲ್ ಕುಮಾರ್ ಇತರರಿದ್ದರು.