ಬೆಂಗಳೂರಿನಲ್ಲಿ ಶಾಪಿಂಗ್​​ ಕಾಂಪ್ಲೆಕ್ಸ್​​ನಿಂದ ಬಿದ್ದು ಯುವತಿ ಸಾವು: ಯುವಕ ಗಂಭೀರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶಾಪಿಂಗ್​​ಗೆ ಬಂದಿದ್ದ ಯುವಕ – ಯುವತಿ ಕಾಂಪ್ಲೆಕ್ಸ್​​ನಿಂದ ಬಿದ್ದಿರುವ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ.
ಲಿಯಾ (18) ಎಂಬ ಯುವತಿ ಸಾವನ್ನಪ್ಪಿದ್ದು, ಯುವಕ ಕ್ರಿಸ್ ಪೀಟರ್ ಗಂಭೀರ ಗಾಯಗೊಂಡಿದ್ದಾನೆ.
ಸೆಂಟ್ ಜೋಸೆಫ್ ಕಾಲೇಜ್​ನಲ್ಲಿ ದ್ವಿತೀಯ ವರ್ಷದ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾಗಿರುವ ಇಬ್ಬರೂ ಇವತ್ತು ಶಾಪಿಂಗ್​ಗೆ ಬಂದಿದ್ದರು. ಈ ವೇಳೆ ಕಾಲು ಜಾರಿ ಕಟ್ಟಡದ ಎರಡನೇ ಮಹಡಿಯಿಂದ ಯುವತಿ ಬಿದ್ದಿದ್ದಾಳೆ. ಯುವತಿ ಹಿಡಿದುಕೊಳ್ಳಲು ಹೋಗಿ ಯುವಕ ಕೂಡ ಬಿದ್ದಿದ್ದಾನೆ. ಯುವತಿಯ ಮೇಲೆಯೇ ಯುವಕ ಬಿದ್ದಿದ್ದರಿಂದ ಬದುಕಿದ್ದಾನೆ. ಯುವಕನ ಕಾಲು ಮುರಿದಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಆದರೆ, ಯುವತಿ ಲಿಯಾ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾಳೆ.
ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!