ಹೊಸ ದಿಗಂತ್ ಆನ್ ಲೈನ್ ಡೆಸ್ಕ್:
ರಾಜ್ಯ ರಾಜಧಾನಿಯಲ್ಲಿ ಮತ್ತೆ ಮಾದಕ ವಸ್ತುಗಳು ಸದ್ದು ಮಾಡ್ತಿದ್ದು, ಮಾರಾಟದಲ್ಲಿ ತೊಡಗಿದ್ದ ನಾಲ್ವರು ಡ್ರಗ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಅಜಾ ಒವೈಸಿ, ಚಾರ್ಲ್ಸ್ ಚಿಮಾ, ಮಲಂಗ್ ಪಾಷಾ, ಜಾಸೀರ್ ಬಂಧಿತರು. ಇವರಿಂದ 24 ಲಕ್ಷ ರೂ. ಮೌಲ್ಯದ ಡ್ರಗ್ ಹಾಗೂ ಮಾರಕಾಸ್ತ್ರಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಜತೆಗೆ ಎರಡು ಬೈಕ್ ಹಾಗೂ ನಾಲ್ಕು ಸಾವಿರ ರೂ. ನಗದು ಹಣ ಪತ್ತೆಯಾಗಿದೆ.
ನೈಜೀರಿಯಾ ಮೂಲದ ಬಂಧಿತರು ಬಾಗಲೂರು ಪೊಲೀಸ್ ಠಾಣೆಯ ಶಾಲೆಯ ಸಮೀಪ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದು, ಆರೋಪಿಗಳ ವಿರುದ್ಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.