ಬೆಳಗಾವಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

ಹೊಸದಿಗಂತ ವರದಿ ಬೆಳಗಾವಿ: ​ಬೆಳಗಾವಿ: ತಾಲೂಕಿನ ಬಡೆಕೋಳ ಮಠದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಪರಿಣಾಮ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ​ನಿರಂತರ ಮಳೆಯಿಂದಾಗಿ ರಸ್ತೆ ತೀವ್ರ ಜಾರುವಂತಾಗಿದ್ದೇ ಈ ದುರಂತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ವಾಹನಗಳ ಸಾಲು ನಿರ್ಮಾಣವಾಗಿ, ಪ್ರಯಾಣಿಕರು ಗಂಟೆಗಟ್ಟಲೆ ಪರದಾಡುವಂತಾಯಿತು. … Continue reading ಬೆಳಗಾವಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್