ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸಲು ಸಚಿವ ರಾಜನಾಥ ಸಿಂಗ್ ರಲ್ಲಿ ಸಿಎಂ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿಯ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡಲು ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!