ಬಂಗಾಳಕೊಲ್ಲಿಯಲ್ಲಿ ತಲೆ ಎತ್ತಿದ ಅಸಾನಿ ಚಂಡಮಾರುತ: ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಅಸಾನಿ ಚಂಡಮಾರುತ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಹೆಚ್ಚು ಮಳೆ ಬೀಳಲಿದೆ.
ಇನ್ನು ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರು ತಕ್ಷಣ ವಾಪಸ್ ಬರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಮತ್ತು ಬೀದರ್‌ನಲ್ಲಿ ಮೇ 9ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.
ಯಾದಗಿರಿ, ರಾಯಚೂರು ಮತ್ತು ವಿಜಯಪುರ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!