ಬೆಂಗಳೂರಿನಲ್ಲಿ ಇನ್ನೆರಡು ದಿನ ವರುಣನ ಅಬ್ಬರ, ಮಕ್ಕಳಿಗೆ ಸ್ಕೂಲಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರಲ್ಲಿ ಮೊನ್ನೆ ರಾತ್ರಿ ಆರಂಭವಾದ ಮಳೆ ನಿನ್ನೆಯೆಲ್ಲ ಸುರಿದು ನಗರದಲ್ಲಿ ಹತ್ತಾರು ಅವಾಂತರಗಳನ್ನ ಸೃಷ್ಟಿ ಮಾಡಿತ್ತು. ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತ ಮಾಡಿದೆ. ಈ ಮಧ್ಯೆ ಹವಾಮಾನ ಇಲಾಖೆ ಮತ್ತೊಮ್ಮೆ ಎಚ್ಚರಿಕೆಯನ್ನ ನೀಡಿದ್ದು, ನಗರದಲ್ಲಿ ಮತ್ತೆರೆಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ

ಬೆಂಗಳೂರಿನಲ್ಲಿ ಇಂದು, ನಾಳೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಬುಧವಾರ ನಗರದ ಪ್ರಾಥಮಿಕ ಮತ್ತು ಫ್ರೌಡ ಶಾಲಾಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಅತ್ತ ಐಟಿ ಕಂಪನಿಗಳು ಕೂಡ ಮಳೆಯ ಎಫೆಕ್ಟ್ ಹಿನ್ನೆಲೆ ತಮ್ಮ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here