ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅಖಂಡ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪ್ರತಿಭಟನೆ ಜೋರಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಚಾಮರಾಜನಗರದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ಸರ್ಕಲ್‌ನಲ್ಲಿ ರೈತರು ಅರೆಬೆತ್ತಲೆ ಉರುಳುಸೇವೆ ಮಾಡಿದ್ದಾರೆ.
ಕಬ್ಬು ಬೆಳೆಗಾರರ ಸಂಘ, ಕನ್ನಡಪರ ಸಂಘಟನೆಗಳು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಟೆ ಬಾರಿಸುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಅರೆಬೆತ್ತಲೆ ಉರುಳುಸೇವೆ ಮಾಡುತ್ತಿದ್ದಾರೆ.
ಇಂದು ಬೆಂಗಳೂರಿನಲ್ಲಿಯೂ ಪ್ರತಿಭಟನೆ ಜೋರಾಗಿದ್ದು, ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ವರೆಗೆ ರ‍್ಯಾಲಿ ಮುಖೇನ ಪ್ರತಿಭಟನೆ ನಡೆಸಲಾಗುತ್ತದೆ. ಟೋಲ್‌ಗಳಿಗೆ ಮುತ್ತಿಗೆ, ಹೆದ್ದಾರಿ ತಡೆ ಸಂಭವವಿದೆ.