Sunday, August 14, 2022

Latest Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ 46 ಮಂದಿಗೆ ಕೊರೋನಾ ಪಾಸಿಟಿವ್, 187 ಮಂದಿ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………

ಹೊಸದಿಗಂತ ವರದಿ, ಚಿಕ್ಕಮಗಳೂರು:

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಒಟ್ಟು 46 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 187 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿ 13, ಕಡೂರು ತಾಲ್ಲೂಕಿನಲ್ಲಿ 11, ತರೀಕೆರೆ 8, ಮೂಡಿಗೆರೆ 3, ಎನ್‍ಆರ್‍ಪುರ 7, ಕೊಪ್ಪ ತಾಲ್ಲೂಕಿನಲ್ಲಿ 4 ಪ್ರಕರಣ ಪತ್ತೆಯಾಗಿದೆ.
ಈ ವರೆಗೆ ಜಿಲ್ಲೆಯಲ್ಲಿ 46845 ಮಂದಿಗೆ ಸೋಂಕು ತಗುಲಿದ್ದು, 44752 ಮಂದಿ ಗುಣಮುಖರಾಗಿದ್ದಾರೆ. 1546 ಸಕ್ರೀಯ ಪ್ರಕರಣಗಳಿವೆ. ಈ ವರೆಗೆ ಒಟ್ಟು 360 ಮಂದಿ ಮೃತಪಟ್ಟಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss