ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………
ಹೊಸದಿಗಂತ ವರದಿ,ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ೧೧ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೩೫,೫೬೧ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೬, ಚಳ್ಳಕೆರೆ ೪, ಹೊಳಲ್ಕೆರೆ ೧ ಪ್ರಕರಣ ಸೇರಿದಂತೆ ಒಟ್ಟು ೧೧ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ ೧೭ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು ೩೦೪೧ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್ನಿಂದ ಇದುವರೆಗೆ ಒಟ್ಟು ೧೮೫ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೩೪,೮೭೬ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೫೦೦ ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೪೮೭೫೬೦ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ೬,೩೦,೩೬೫ ಜನರ ಮಾದರಿ ಸಂಗ್ರಹಿಸಲಾಗಿದ್ದು, ೫,೯೧,೫೬೭ ಜನರ ವರದಿ ನೆಗೆಟೀವ್ ಬಂದಿದೆ. ಉಳಿದ ೨೩೭೧ ಜನರ ವರದಿ ಬರುವುದು ಬಾಕಿ ಇದೆ. ೮೬೬ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.