ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 21 ಜನರಿಗೆ ಕೋವಿಡ್ ಸೋಂಕು, 29 ಮಂದಿ ಗುಣಮುಖ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ,ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-೧೯ ವೈರಸ್‌ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ೨೧ ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ೩೫,೬೧೧ ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ೬, ಚಳ್ಳಕೆರೆ ೫, ಹಿರಿಯೂರು ೮, ಹಾಗೂ ಮೊಳಕಾಲ್ಮುರು ೨ ಪ್ರಕರಣಗಳು ಸೇರಿದಂತೆ ಒಟ್ಟು ೨೧ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ ೨೯ ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು ೨೪೫೮ ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್‌ನಿಂದ ಇದುವರೆಗೆ ಒಟ್ಟು ೧೮೬ ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ ೩೪,೯೨೯ ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ ೪೯೬ ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು ೪೮೮೫೭೧ ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ ೬,೩೪,೩೭೭ ಜನರ ಮಾದರಿ ಸಂಗ್ರಹಿಸಲಾಗಿದ್ದು, ೫,೯೬,೬೧೭ ಜನರ ವರದಿ ನೆಗೆಟೀವ್ ಬಂದಿದೆ. ಉಳಿದ ೧೨೮೩ ಜನರ ವರದಿ ಬರುವುದು ಬಾಕಿ ಇದೆ. ೮೬೬ ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss