Friday, July 1, 2022

Latest Posts

ಚಿತ್ರದುರ್ಗ ಜಿಲ್ಲೆಯಲ್ಲಿ 16 ಜನರಿಗೆ ಕೋವಿಡ್ ಸೋಂಕು ದೃಢ

ಹೊಸ ದಿಗಂತ ವರದಿ, ಚಿತ್ರದುರ್ಗ:
|
ಜಿಲ್ಲೆಯಲ್ಲಿ ಕೋವಿಡ್-19 ವೈರಸ್‌ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 16 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,555ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 17, ಹಿರಿಯೂರು 03 ಹಾಗೂ ಹೊರ ಜಿಲ್ಲೆಯ 16 ಪ್ರಕರಣಗಳು ಸೇರಿದಂತೆ ಒಟ್ಟು 16 ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯ ಹಲವೆಡೆ ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 27 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 1021 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಇದುವರೆಗೂ ಒಟ್ಟು 70 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,364 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 121 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,26,840 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 3,80,288 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,63,323 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 709 ಜನರ ವರದಿ ಬರುವುದು ಬಾಕಿ ಇದೆ. 695 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss