ಕಾಂಗ್ರೆಸ್ ಪಕ್ಷದಲ್ಲಿ ಸಿಎಂ‌ ಆಗಲು ಎಸ್.ಆರ್.ಪಾಟೀಲ ಯೋಗ್ಯ ಅಭ್ಯರ್ಥಿ: ಮೋಯ್ಲಿ ಸ್ಫೋಟಕ ಹೇಳಿಕೆ

ಹೊಸ ದಿಗಂತ ವರದಿ, ಬಾಗಲಕೋಟೆ:

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗಾಗಿ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವುಕುಮಾರ ಬೆಂಬಲಿಗರ ಪೈಪೋಟಿ ಅಬ್ಬರ ಇರುವಾಗ ಈಗ ಎಸ್.ಆರ್.ಪಾಟೀಲರು ಮುಖ್ಯಮಂತ್ರಿ ಸ್ಥಾನಕ್ಕೆ ಯೋಗ್ಯ ಅಭ್ಯರ್ಥಿ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವೀರಪ್ಪ ಮೋಯ್ಲಿ ಸ್ಪೋಟಕ ಹೇಳಿಕೆ ನೀಡಿದರು.

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ನಡೆದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಆರ್.ಪಾಟೀಲವರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ ಸಂದರ್ಭ ಭಾನುವಾರ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿರುವ ವೀರಪ್ಪ ಮೋಯ್ಲಿ , ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅತ್ಯಂತ ಆದರ್ಶ ಹಾಗೂ ಯೋಗ್ಯ ವ್ಯಕ್ತಿ ಎಸ್.ಆರ್.ಪಾಟೀಲರು ಎಂದರು.

ಎಸ್.ಆರ್.ಪಾಟೀಲರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಕೂಡ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದೆ. ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಮನಸ್ಸು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!