ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಬಿಜೆಪಿ ತೆಕ್ಕೆಗೆ, ಎರಡು ಕಾಂಗ್ರೆಸ್ ಪಾಲು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬೆಳ್ತಂಗಡಿ, ಮೂಡುಬಿದಿರೆ, ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.

ಮಂಗಳೂರು ನಗರ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪಾಲಾಗಿದೆ.

ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಭರತ್ ಶೆಟ್ಟಿ, ಬೆಳ್ತಂಗಡಿಯ ಹರೀಶ್ ಪೂಂಜ, ಮೂಡುಬಿದಿರೆಯ ಉಮನಾಥ್ ಕೋಟ್ಯಾನ್, ಬಂಟ್ವಾಳದ ರಾಜೇಶ್ ನಾಯ್ಕ್ ಅವರು ಗೆಲುವು ಸಾಧಿಸಿದ್ದಾರೆ.

ಮಂಗಳೂರು ನಗರದಲ್ಲಿ ಖಾದರ್ ಅವರು ಜಯ ಗಳಿಸಿದ್ದು,, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಶೋಕ್ ರೈ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!