ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರೆಗೆ ಅಂಗಡಿ, ವ್ಯಾಣಿಜ್ಯ ಸಮುಚ್ಛಯ ಬಂದ್ ಸಹಿತ ವಿವಿಧ ನಿರ್ಬಂಧಗಳನ್ನು ಆ.3ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದಿನ ಆದೇಶದಲ್ಲಿ ಆ.1ರವರೆಗೆ ನಿರ್ಬಂಧ ಹೇರಲಾಗಿದೆ ಎಂದು ಹೇಳಲಾಗಿತ್ತು. ಈ ಎಲ್ಲ ನಿರ್ಬಂಧಗಳನ್ನು ಜಿಲ್ಲೆಯಾದ್ಯಂತ ಮುಂದಿನ ಎರಡು ದಿನ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಸೆಕ್ಷನ್ 144 ಆ.6ರವರೆಗೆ ಜಾರಿಯಲ್ಲಿರಲಿದೆ. ಮದ್ಯದಂಗಡಿ ಬಂದ್ ಆದೇಶವೂ ಮುಂದಿನ ಎರಡು ದಿನಗಳ ಕಾಲ ವಿಸ್ತರಣೆಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!