ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕರ್ನಾಟಕ ಸೇರಿದಂತೆ ದೇಶದ ಹತ್ತು ರಾಜ್ಯಗಳಲ್ಲಿ ಪ್ರತಿ ದಿನ ಶೇ.79.10ರಷ್ಟು ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಉತ್ತರ ಪ್ರದೇಶ, ಕರ್ನಾಟಕ, ದೆಹಲಿ, ಮಹಾರಾಷ್ಟ್ರ, ಛತ್ತೀಸ್ಗಡ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಗುಜರಾತ್, ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ವೇಗವಾಗಿ ಏರಿಕೆಯಾಗುತ್ತಿದೆ. ಪ್ರತಿ ದಿನ ಪತ್ತೆಯಾಗು ಕೊರೋನಾ ಪ್ರಕರಣದಲ್ಲಿ ಮುಕ್ಕಾಲು ಭಾಗ ಹೊಸ ಪ್ರಕರಣಗಳೇ ಆಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಹತ್ತು ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ ಮತ್ತು ದೆಹಲಿ ನಂತರದ ಸ್ಥಾನದಲ್ಲಿದೆ.