ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್: ಸಿಎಂ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ, ನಗರ ಹಾಗೂ ಗ್ರಾಮೀಣ ಭಾಗದ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ತಿಂಗಳು 300 ಯುನಿಟ್ ವಿದ್ಯುತ್ ಉಚಿತ ನೀಡಲಾಗುವುದು ಎಂದು ದೆಹಲಿ ಸಿಎಂ ಹಾಗೂ ಆಪ್ ರಾಷ್ಟ್ರೀಯ ಅಧ್ಯಕ್ಷ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 31, 2021ರವರೆಗೆ ಬಾಕಿ ಉಳಿದಿರುವ ವಿದ್ಯುಚ್ಛಕ್ತಿ ಬಿಲ್​ಗಳನ್ನು ಮನ್ನಾ ಮಾಡಲಾಗುವುದು, ಎಲ್ಲ ಗೃಹಬಳಕೆ ಗ್ರಾಹಕರಿಗೆ 300 ಯುನಿಟ್ ವಿದ್ಯುಚ್ಛಕ್ತಿ ಉಚಿತ ನೀಡಲಿದ್ದೇವೆ. ನಗರ ಹಾಗೂ ಗ್ರಾಮಗಳಲ್ಲಿ ವಾರದ ಎಲ್ಲ ದಿನಗಳ 24 ಗಂಟೆಯೂ ವಿದ್ಯುತ್ ಪೂರೈಕೆಯಾಗುವಂತೆ ಮಾಡುತ್ತೇವೆ ಎಂದು ಕೇಜ್ರಿವಾಲ್ ತಿಳಿಸಿದರು.
ನಾವು ಚುನಾವಣೆ ಗಿಮಿಕ್ ಮಾಡಲ್ಲ. ಏನು ಹೇಳ್ತೀವೋ ಅದನ್ನೇ ಮಾಡ್ತೇವೆ ಎಂದು ಕೇಜ್ರಿವಾಲ್ ಭರವಸೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!