Wednesday, August 10, 2022

Latest Posts

ಕೋವಿಡ್ ರೂಪಾಂತರಿ: ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ನ. 30ರವರೆಗೂ ವಿಸ್ತರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ರೂಪಾಂತರಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ  ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಭಾರತದಲ್ಲಿ ಹೇರಲಾಗಿದ್ದ ನಿರ್ಬಂಧವನ್ನು ನವೆಂಬರ್ 30ರವಗೆ ವಿಸ್ತರಿಸಲಾಗಿದೆ.

ಭಾರತದಲ್ಲಿ ಕೋವಿಡ್ ಮಾತ್ರವಲ್ಲದೇ ರೂಪಾಂತರಿ ವೈರಸ್​ ಗಳಾದ ನಿಫಾ, ಎವೈ 4.2 ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆ ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲೆ ವಿಧಿಸಿದ್ದ ನಿಷೇಧವನ್ನು ನವೆಂಬರ್ 30ರವರೆಗೂ ವಿಸ್ತರಿಸಲು ಕೇಂದ್ರ ನಿರ್ಧರಿಸಿದೆ.

ಈ ಬಗ್ಗೆ ಡಿಜಿಸಿಎ ಸುತ್ತೋಲೆ ಹೊರಡಿಸಿದ್ದು, ಈ ಆದೇಶ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದೆ. ಅಂತಾರಾಷ್ಟ್ರೀಯ ಸರಕು ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಅನ್ವಯಿಸುವುದಿಲ್ಲ.

ಹಾಗೆಯೇ ಡಿಜಿಸಿಎಯಿಂದ ಅನುಮತಿ ಪಡೆದಿರುವ ಕಾರ್ಗೋ ವಿಮಾನಗಳ ಸಂಚಾರಕ್ಕೆ ನಿರ್ಬಂಧವಿರುವುದಿಲ್ಲ ಮತ್ತು ವಿಶೇಷ ಅನುಮತಿ ಪಡೆದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನ ಸಂಚಾರ ಮಾಡಲು ಅವಕಾಶವಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss