ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಫ್ಘಾನ್ ನಲ್ಲಿರುವ ಉಕ್ರೇನ್ ಜನರನ್ನು ಸ್ಥಳಾಂತರಿಸಲು ಬಂದಿದ್ದ ವಿಮಾನವನ್ನು ಉಗ್ರರು ಅಪಹರಿಸಿದ್ದಾರೆ ಎಂದು ಉಕ್ರೇನ್ನ ಉಪ ವಿದೇಶಾಂಗ ಸಚಿವ ಯೆವ್ಗೆನಿ ಯೆನಿನ್ ಮಂಗಳವಾರ ಮಾಹಿತಿ ನೀಡಿದ್ದಾರೆ.
ಏರ್ ಲಿಫ್ಟ್ ಮಾಡಲು ಆಗಮಿಸಿದ್ದ ವಿಮಾನವನ್ನು ಹೈಜಾಕ್ ಮಾಡಲಾಗಿದ್ದು, ಅಪರಿಚಿತ ಜನರೊಂದಿಗೆ ವಿಮಾನವನ್ನು ಇರಾನ್ ನತ್ತ ಹಾರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
98 ಜನರಿದ್ದ ಉಕ್ರೇನ್ ವಿಮಾನವನ್ನು ಹೈಜಾಕ್ ಮಾಡಲಾಗಿದ್ದು, ಸದ್ಯ ಕಾಬೂಲ್ ಏರ್ ಪೋರ್ಟ್ ನಲ್ಲಿ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ. ಸುಮಾರು 100 ಉಕ್ರೇನಿಯರು ಇನ್ನೂ ಅಫ್ಘಾನಿಸ್ತಾನದಲ್ಲೇ ಬೀಡುಬಿಟ್ಟಿದ್ದು, ಸ್ಥಳಾಂತರಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ ಎಂದು ವರದಿ ತಿಳಿಸಿದೆ.