ಹೊಸ ದಿಗಂತ ವರದಿ, ಕಲಬುರಗಿ:
ಕೊರೋನಾ ಸೋಂಕಿನಿಂದ ಕಲಬುರಗಿ ನಗರದಲ್ಲಿ ಇಬ್ಬರು ನಿಧನರಾಗಿದ್ದು,ಅದರಂತೆ 205 ಪಾಸಿಟಿವ್ ವರದಿಗಳು ದೃಢವಾಗಿವೆ ಎಂದು ಬುಧವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ಸಾರಿ ಹಿನ್ನೆಲೆ ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿಯ ಮೋಮಿನಪುರ ಪ್ರದೇಶದ 75 ವರ್ಷದ ವೃದ್ಧೆ ಮಾ.29 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ, ಏ.6 ರಂದು ನಿಧನ ಹೊಂದಿದ್ದಾರೆ.
ಅದೇ ರೀತಿ ಸಾರಿ ಹಿನ್ನೆಲೆಯಿಂದ ಕಲಬುರಗಿಯ ಮಿಲ್ಲತ್ ನಗರದ 60 ವರ್ಷದ ವೃದ್ಧೆ ಏ.5 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ, ಏ.6 ರಂದು ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 355 ಜನ ನಿಧನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.