ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ವಿಘ್ನನಿವಾರಕನ ಸೇವೆಯಲ್ಲಿ ಕಾಂಗ್ರೆಸ್ ಸರ್ಕಾರ ಅವ್ಯವಸ್ಥೆ ಸೃಷ್ಟಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ವೇಳೆ ಆದ ಗಲಭೆ, ಘರ್ಷಣೆಗಳ ಕುರಿತು ಬೇಸರ ವ್ಯಕ್ತಪಡಿಸಿದ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್ ಒಂದು ವರ್ಗದ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ತುಷ್ಟೀಕರಣಕ್ಕಾಗಿ ಕೆಳಮಟ್ಟಕ್ಕೆ ಇಳಿಯಬಹುದು. ಇಂದು ಗಣಪತಿಯನ್ನೂ ಕಾಂಗ್ರೆಸ್ ಸರ್ಕಾರ ಕಂಬಿ ಹಿಂದೆ ಹಾಕಿದೆ ಎಂದು ಟೀಕಿಸಿದ್ದಾರೆ.
ಇಡೀ ದೇಶವೇ ಗಣಪತಿ ಹಬ್ಬವನ್ನು ಆಚರಿಸುತ್ತದೆ. ಕರ್ನಾಟಕದಲ್ಲಿ ವಿಘ್ನನಿವಾರಕರ ಪೂಜೆಗೂ ಕಾಂಗ್ರೆಸ್ ವಿಘ್ನ ಮಾಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.