spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾಸರಗೋಡು ಜಿಲ್ಲೆಯಲ್ಲಿ ಇಂದು 261 ಜನರಿಗೆ ಕೊರೋನಾ ಸೋಂಕು, 431 ಮಂದಿ ಗುಣಮುಖ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಕಾಸರಗೋಡು:

ಜಿಲ್ಲೆಯಲ್ಲಿ ಮಂಗಳವಾರ 261 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 250 ಜನರಿಗೆ ಸಂಪರ್ಕದ ಮೂಲಕ ವೈರಸ್ ತಗಲಿದೆ. ಅಲ್ಲದೆ ಜಿಲ್ಲೆಯಲ್ಲಿ 431 ಮಂದಿ ಸೋಂಕುಮುಕ್ತರಾದರು. ಜಿಲ್ಲೆಯಲ್ಲಿ ವೈರಸ್ ಬಾಧಿಸಿ ಮಂಗಳವಾರ 5 ಮಂದಿ ಸಾವನ್ನಪ್ಪಿದ್ದು , ಅದರಂತೆ ಒಟ್ಟು ಸಾವಿನ ಸಂಖ್ಯೆ 498 ಕ್ಕೇರಿದೆ. ಇದೇ ವೇಳೆ ಕೇರಳದಲ್ಲಿ ಹೊಸದಾಗಿ 15,876 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರಲ್ಲಿ 14,959 ಮಂದಿಗೆ ಸಂಪರ್ಕದಿಂದ ವೈರಸ್ ತಗಲಿದೆ. ರಾಜ್ಯದಲ್ಲಿ 25,654 ಜನರು ಗುಣಮುಖರಾದರು.
ಕೇರಳದ ಜಿಲ್ಲೆಗಳ ಪೈಕಿ ತೃಶೂರು ಜಿಲ್ಲೆಯಲ್ಲಿ 1936, ಎರ್ನಾಕುಳಂ 1893, ತಿರುವನಂತಪುರ 1627, ಪಾಲಕ್ಕಾಡು 1591, ಮಲಪ್ಪುರಂ 1523, ಕೊಲ್ಲಂ 1373, ಆಲಪ್ಪುಳ 1118, ಕಲ್ಲಿಕೋಟೆ 1117, ಕಣ್ಣೂರು 1099, ಕೋಟ್ಟಾಯಂ 1043, ಪತ್ತನಂತ್ತಿಟ್ಟ 632, ಇಡುಕ್ಕಿ 367, ವಯನಾಡು 296, ಕಾಸರಗೋಡು ಜಿಲ್ಲೆಯಲ್ಲಿ 261 ಜನರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಮಧ್ಯೆ ಕೇರಳದಲ್ಲಿ ಮಂಗಳವಾರ ಕೊರೋನಾ ಬಾಧಿಸಿ 129 ಮಂದಿ ಮರಣ ಹೊಂದಿದರು. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಒಟ್ಟು 22,779 ಜನರು ಅಸುನೀಗಿದರು. ಕೇರಳದಲ್ಲಿ ಮಂಗಳವಾರ ಕೊರೋನಾ ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ಶೇಕಡಾ 15.12 ರಷ್ಟು ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss