ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಮತ ಚಲಾಯಿಸುವ ಅಧಿಕಾರ ನೀಡಿದ ಬೆನ್ನಲ್ಲೇ ಬಂತು ಉಗ್ರರಿಂದ ಬೆದರಿಕೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಾಶ್ಮೀರದಲ್ಲಿ ಸ್ಥಳೀಯರಲ್ಲದವರಿಗೂ ಚುನಾವಣೆಯಲ್ಲಿ ಮತಚಲಾಯಿಸುವ ಅಧಿಕಾರ ನೀಡಿರುವ ಬೆನ್ನಲ್ಲೇ ಭಯೋತ್ಪಾದಕರಿಂದ ಬೆದರಿಕೆ ಸಂದೇಶವೊಂದು ರವಾನೆಯಾಗಿದೆ. ಲಷ್ಕರ್-ಎ-ತೊಯ್ಬಾದ ಬೆಂಬಲ ಹೊಂದಿರುವ ಕಾಶ್ಮೀರ್‌ ಫೈಟ್‌ ಎಂಬ ಉಗ್ರಗಾಮಿ ಸಂಘಟನೆಯೊಂದು ಕಾಶ್ಮೀರದಲ್ಲಿರುವ ಇತರ ರಾಜ್ಯದ ಜನರಿಗೂ ಮತದಾನ ಮಾಡುವ ಹಕ್ಕು ನೀಡಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು ಈ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯರಲ್ಲದವರ ಮೇಲೆ ದಾಳಿಯನ್ನು ತೀವ್ರಗೊಳಿಸುವುದಾಗಿ ಬೆದರಿಕೆ ಹಾಕಿದೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಹಿರ್ದೇಶ್ ಕುಮಾರ್ ಅವರು ಕಾಶ್ಮೀರದಲ್ಲಿ ಸಾಮಾನ್ಯವಾಗಿ ವಾಸಿಸುವ ಉದ್ಯೋಗಿಗಳು, ವಿದ್ಯಾರ್ಥಿಗಳು, ಕಾರ್ಮಿಕರು ಅಥವಾ ಹೊರಗಿನವರು ಸೇರಿದಂತೆ ಸ್ಥಳೀಯರಲ್ಲದವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಘೋಷಿಸಿದ್ದರು.

ಹೊರಗಿನವರು ಮತದಾರರಾಗಿ ಸೇರ್ಪಡೆಗೊಳ್ಳಲು ನಿವಾಸದ ಅವಶ್ಯಕತೆ ಇಲ್ಲ ಅವರು ಕಾಶ್ಮೀರ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಕಾಶ್ಮೀರದ ಶಾಂತಿ ಕೇಂದ್ರಗಳಲ್ಲಿ ನಿಯೋಜಿಸಲಾದ ಇತರ ರಾಜ್ಯಗಳ ಸಶಸ್ತ್ರ ಪಡೆಗಳ ಸಿಬ್ಬಂದಿ ಕೂಡ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬಹುದು ಎಂದು ಹೇಳಿದ್ದರು.

ಇದರ ವಿರುದ್ಧ ಉಗ್ರಗಾಮಿ ಸಂಘಟನೆಗಳು ಬೆದರಿಕೆ ಸಂದೇಶವನ್ನು ರವಾನಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!