spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 26, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೇರಳದಲ್ಲಿ ಕೊರೋನಾ ಹೆಚ್ಚಳ: ದ.ಕ. -ಕಾಸರಗೋಡು ಬಸ್ ಸಂಚಾರ ಬಂದ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………

ಹೊಸ ದಿಗಂತ ವರದಿ, ಮಂಗಳೂರು:

ನೆರೆಯ ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳನ್ನು ಆ.1ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ಅವರು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊರೋನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೋನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದ ಅವರು, ಆಗಸ್ಟ್1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರವನ್ನು ನಿಲ್ಲಿಸಬೇಕು. ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು. ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‌ನಲ್ಲಿಯೇ ಇರಬೇಕು. ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮ ಕೈಗೊಳ್ಳಬೇಕು, ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ ಎರಞಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‌ಮೆಂಟ್ ಜೋನ್ ಎಂದು ಪರಿಗಣಿಸಬೇಕು ಎಂದರು.
ಮದುವೆಗೆ 50 ಜನ ಮಾತ್ರ
ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆ.10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದ ಅವರು, ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್‌ನ್ನು ನಿಯೋಜಿಸಬೇಕು ಎಂದರು.
ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು.
ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್‌ನಲ್ಲಿ ಇರುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್‌ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದೂ, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45ವರ್ಷ ಮೇಲ್ಪಟ್ಟವರಿಗೆ ಶೇ.೬೦ ಆನ್‌ಲೈನ್ ರಿಜಿಸ್ಟ್ರೇಷನ್ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ. 80 ಆನ್‌ಲೈನ್ ರಿಜಿಸ್ರ್ಟೇಷನ್ ಮತ್ತು ಶೇ.೨೦ ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.
ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿ ಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಭಗವಾನ್ ಸೋನಾವಣೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಕುಮಾರ್ ಸೇರಿದಂತೆ ಉಪವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss