ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೇ 20ರಂದು ಕೇರಳ ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.
ಅದೇ ರೀತಿ ಮೇ 25ರಂದು ಪ್ಲಸ್ ಟು ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ.
ರಾಜ್ಯದಲ್ಲಿ 2,960 ಕೇಂದ್ರಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 4,19,554 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಹೈಯರ್ ಸೆಕೆಂಡರಿಯಲ್ಲಿ 4,42,067 ವಿದ್ಯಾರ್ಥಿಗಳು ಪ್ಲಸ್ ಟು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಪರೀಕ್ಷೆಗೆ ಒಟ್ಟು 2,023 ಕೇಂದ್ರಗಳಿದ್ದವು.
ಇನ್ನು ಶೈಕ್ಷಣಿಕ ವರ್ಷದ ಶಾಲೆಗಳು ಜೂನ್ ಒಂದರಂದು ಆರಂಭಗೊಳ್ಳಲಿದೆ. ಪಠ್ಯಪುಸ್ತಕ ವಿತರಣೆ ಪ್ರಕ್ರಿಯೆ ಶೇಕಡಾ 80ರಷ್ಟು ಪೂರ್ಣಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.