ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಸೋಮವಾರ 35 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 16, ಸೋಮವಾರಪೇಟೆ ತಾಲೂಕಿನಲ್ಲಿ 14, ವೀರಾಜಪೇಟೆ ತಾಲೂಕಿನಲ್ಲಿ 5 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 34 ಸಾವಿರದಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 66 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ 33,044 ಮಂದಿ ಗುಣಮುಖರಾದಂತಾಗಿದೆ.
ಪ್ರಸಕ್ತ 542 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಒಟ್ಟು 414 ಮಂದಿ ಸಾವಿಗೀಡಾಗಿದ್ದಾರೆ. ಕಂಟೈನ್ಮೆಂಟ್ ವಲಯಗಳ ಸಂಖ್ಯೆ 76ರಷ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.3.1ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.