ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಡಿಕೇರಿ:
ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 55.27 ಮಿ.ಮೀ. ಮಳೆಯಾಗಿದೆ.
ವೀರಾಜಪೇಟೆ ತಾಲೂಕಿನಲ್ಲಿ ಬುಧವಾರ ಸುರಿದ ಧಾರಾಕಾರ ಗಾಳಿ, ಮಳೆಗೆ ಕೆದಮಳ್ಳೂರು (ತೋರ) ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿ ಪಿ.ಟಿ. ಪಾರ್ವತಿ ಎಂಬವರು ಕಳೆದ ಒಂದು ತಿಂಗಳಿನಿಂದ ಮಗಳ ಮನೆಯಲ್ಲಿ ವಾಸವಿದ್ದುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಳೆದ 24 ಗಂಟೆಗಳಲ್ಲಿ ಮಡಿಕೇರಿ ತಾಲೂಕಿನಲ್ಲಿ 78.87 ಮಿ.ಮೀ., ವೀರಾಜಪೇಟೆ ತಾಲೂಕಿನಲ್ಲಿ 54.52 ಮಿ.ಮೀ., ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 32.43 ಮಿ.ಮೀ. ಮಳೆ ಬಿದ್ದಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರದನ್ವಯ ಮಡಿಕೇರಿ ಕಸಬಾ 64.6, ಸಂಪಾಜೆ 49.5, ನಾಪೋಕ್ಲು 76.2, ಭಾಗಮಂಡಲ 125.2, ವೀರಾಜಪೇಟೆ ಕಸಬಾ 68, ಹುದಿಕೇರಿ 73.5, ಶ್ರೀಮಂಗಲ 93, ಪೊನ್ನಂಪೇಟೆ 49.1, ಅಮ್ಮತ್ತಿ 29.5, ಬಾಳೆಲೆ 14, ಸೋಮವಾರಪೇಟೆ ಕಸಬಾ 25.4, ಶನಿವಾರಸಂತೆ 19, ಶಾಂತಳ್ಳಿ 76.4, ಕೊಡ್ಲಿಪೇಟೆ 35.2, ಕುಶಾಲನಗರ 8.6, ಸುಂಟಿಕೊಪ್ಪ 30 ಮಿ.ಮೀ.ಮಳೆಯಾಗಿರುವುದಾಗಿ ವರದಿಯಾಗಿದೆ.
ಹಾರಂಗಿ ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಬುಧವಾರ ಜಲಾಶಯದಲ್ಲಿ 2829.35 ಅಡಿ ನೀರು ಸಂಗ್ರಹವಾಗಿತ್ತು. ಪ್ರಸಕ್ತ ಜಲಾಶಯಕ್ಕೆ 992 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿಗೆ ಹಾಗೂ ನಾಲೆಗೆ ತಲಾ 40 ಕ್ಯುಸೆಕ್ನಂತೆ ಒಟ್ಟು 80 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.