Tuesday, June 28, 2022

Latest Posts

ಮಹಾರಾಷ್ಟ್ರದಲ್ಲಿ ಇಂದು 56,286 ಮಂದಿಗೆ ಕೊರೋನಾ ಪಾಸಿಟಿವ್, 376 ಮಂದಿ ಬಲಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು , ಕಳೆದ 24 ಗಂಟೆಗಳಲ್ಲಿ 56,286 ಹೊಸ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ ಈಗ 32,29,547 ಆಗಿದೆ.
ಕೊರೋನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ 376 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 57,028 ಕ್ಕೆ ತಲುಪಿದೆ.
ಇಂದು 36,130 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯದಲ್ಲಿ ಒಟ್ಟು 26,49,757 ಮಂದಿ ಚೇತರಿಸಿಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಈಗ ಚೇತರಿಕೆ ಪ್ರಮಾಣವು ಶೇಕಡಾ 82.05 ಆಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss