ಹೊಸ ದಿಗಂತ ವರದಿ, ಮಡಿಕೇರಿ:
ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಮಾರ್ಗೊಲ್ಲಿ ಕಾಫಿ ತೋಟದಲ್ಲಿ ಬೃಹತ್ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದೆ. ಕೆಲವು ದಿನಗಳ ಹಿಂದೆ ಇದೇ ಹುಲಿ ಆನೆ ಕಂದಕದ ಬಳಿ ಪ್ರತ್ಯಕ್ಷವಾಗಿತ್ತು.
ಇದೀಗ ಹಾಡಹಗಲೇ ಕಫಿ ತೋಟದಲ್ಲಿ ಕಾಣಿಸಿಕೊಳ್ಳುವ ಮೂಲಕ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಟಿಸಿದೆ. ಕಾರ್ಮಿಕರು ತೋಟಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ಕಾಫಿ ಮತ್ತು ಕಾಳುಮೆಣಸು ಕೊಯ್ಲು ಆಗದೆ ತೋಟದ ಮಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಇಷ್ಟು ದಿನ ಕಾಡಾನೆಗಳ ಹಾವಳಿಯಿಂದ ಬೇಸತ್ತಿದ್ದ ಬೆಳೆಗಾರರು ಇದೀಗ ಹುಲಿ ಉಪಟಳದಿಂದ ಕಂಗೆಟ್ಟಿದ್ದಾರೆ.
ಕಳೆದ ಒಂದು ವಾರದಿಂದ ಹುಲಿ ಈ ಭಾಗದಲ್ಲಿ ಸಂಚರಿಸುತ್ತಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಇದ್ದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.