ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………..
ಹೊಸದಿಗಂತ ವರದಿ,ಮಂಡ್ಯ:
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಮಂಡ್ಯದಲ್ಲೊಂದು ಅಪ್ರಾಪ್ತ ಬಾಲಕಿ ಮೇಲೆ ಚಿಕ್ಕಪ್ಪನೇ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ನಗರದಲ್ಲಿ ನಡೆದಿದೆ.
ನಗರದ ಸಲ್ಮಾನ್ (32) ಎಂಬಾತನೇ ತನ್ನ ನಾದಿನಿಯ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ.
ಅಪ್ರಾಪ್ತ ಬಾಲಕಿಯನ್ನು ಶಾಲೆಯಿಂದ ಕರೆದುಕೊಂಡು ಹೋದ ಸಲ್ಮಾನ್ ನಿರ್ಜನ ಪ್ರದೇಶದಲ್ಲಿ ಆಕೆಯ ವಿರುದ್ಧವಾಗಿ ಅತ್ಯಾಚಾರವೆಸಗಿದ್ದಾನೆ. ಘಟನೆ ಬಳಿಕ ಬಾಲಕಿ ತನ್ನ ಪೋಷಕರಿಗೆ ಈ ವಿಚಾರವನ್ನು ತಿಳಿಸುವುದಾಗಿ ಹೇಳಿದಾಗ ಆರೋಪಿ ಆಕೆಯ ಮೇಲೆ ಹಲ್ಲೆಯನ್ನೂ ಸಹ ಮಾಡಿದ್ದಾನೆ.
ಹಲ್ಲೆಗೊಳಗಾದ ಬಾಲಕಿಯ ಮುಖದ ಮೇಲೆ ಗಾಯದ ಗುರುತುಗಳು ಆಗಿವೆ. ಪೋಷಕರ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.