ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮಂಡ್ಯ :
ಹೊಂಬಾಳೆ ಗ್ರೂಪ್ಸ್ೃ ವತಿಯಿಂದ ಜಿಲ್ಲೆಯ ಜನತೆಯ ಆರೋಗ್ಯ ದೃಷ್ಠಿಯಿಂದ ಅತ್ಯಾಧುನಿಕ ತೀವ್ರ ನಿಗಾ ಘಟಕ (ಐಸಿಯು) ಮತ್ತು ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿದ್ದು, ಈಗಾಗಲೇ ಜನರ ಸೇವೆಗೆ ನಿಯೋಜಿತವಾಗಿವೆ.
ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಗ್ರೂಪ್ಸ್ನವರು ಮಂಡ್ಯದ ಮಿಮ್ಸ್ ಆವರಣದಲ್ಲಿ 55 ಲಕ್ಷ ರೂ. ವೆಚ್ಚದಲ್ಲಿ 2 ಕೊಠಡಿಗಳಲ್ಲಿ 20 ಹಾಸಿಗೆಗಳ ತೀವ್ರ ನಿಗಾ ಘಟಕವನ್ನು ನಿರ್ಮಿಸಿದ್ದುಘಿ, ಅದಕ್ಕೆ ಅಗತ್ಯವಾದ ಎಲ್ಲ ಪರಿಕರಗಳನ್ನೂ ಸಹ ನೀಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಲೋಕಾರ್ಪಣೆ ಮಾಡಿದ್ದರು. ಸಧ್ಯ ತೀವ್ರ ನಿಗಾ ಘಟಕ ಬಳಕೆಯಾತ್ತಿದೆ. ಇದರೊಂದಿಗೆ ಜಿಲ್ಲೆಯ ರೋಗಿಗಳಿಗೆ ಅತ್ಯಾಧುನಿಕ ಆರೋಗ್ಯ ಚಿಕಿತ್ಸೆ ಲಭ್ಯವಾಗಲು ಕಾರಣರಾಗಿದ್ದಾರೆ.
ಅತ್ಯಾಧುನಿಕ ಸೌಲಭ್ಯ :
ಈ ನೆರವಿನ ಮೂಲಕ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ 55 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಐಸಿಯು ಸ್ಥಾಪಿಸಲಾಗಿದೆ. ನೂತನ ಐಸಿಯುನಲ್ಲಿ ಜಾಗತಿಕ ಗುಣಮಟ್ಟದ ವೆಂಟಿಲೇಟರ್ಗಳು, ಮಾನಿಟರ್ಗಳನ್ನು ಅಳವಡಿಸಲಾಗಿದೆ. ಮುಖ್ಯವಾಗಿ ರಿಮೋಟ್ ಕಂಟ್ರೋಲ್ ವ್ಯವಸ್ಥೆ ಇದ್ದು, ವೈದ್ಯರು ಯಾವುದೇ ಭಾಗದಲ್ಲಿದ್ದರೂ ರೋಗಿಗೆ ಅತ್ಯುತ್ತಮ ಚಿಕಿತ್ಸೆ ನೀಡಬಹುದು. ಚತುಷ್ಮುಖಿಸಂಪರ್ಕ ಜಾಲದ ಸೌಲಭ್ಯವನ್ನು ಈ ಐಸಿಯು ಹೊಂದಿದೆ. ಮಂಡ್ಯದಲ್ಲಿ ಇದೇ ಮೊದಲಿಗೆ ಇಂಥ ಆಧುನಿಕ ಐಸಿಯು ಸ್ಥಾಪನೆ ಆಗಿದೆ.