ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಹಾಗೂ ಕೆಲ ಜಿಲ್ಲೆಗಳಲ್ಲಿ ಚಳಿ ಕೂಡ ಹೆಚ್ಚಾಗಿದ್ದು, ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಮನೆಯಲ್ಲಿ ಬೆಡ್‌ಶೀಟ್ ಹೊದ್ದು ಬೆಚ್ಚಗೆ ಮಲಗುವ ವೆದರ್ ಇಂದು ಇರಲಿದೆ.
ಬೆಂಗಳೂರು ನಗರ, ಗ್ರಾಮಾಂತರ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಅ.10 ಭಾರೀ ಮಳೆಯಾಗಬಹುದು. ಮುಂದಿನ ನಾಲ್ಕೈದು ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.