ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಳೆದ ವಾರದಿಂದ ವಿಪರೀತ ಚಳಿಯಿಂದ ಜನ ತತ್ತರಿಸಿದ್ದು, ಇದೀಗ ಚಳಿ ಜೊತೆ ಮಳೆಯೂ ಸೇರಲಿದೆ. ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಬೆಂ. ಗ್ರಾಮಾಂತರ, ಮಂಡ್ಯ, ರಾಮನಗರ, ಹಾವೇರಿ, ಮೈಸೂರು, ತುಮಕೂರು ಹಾಗೂ ವಿಜಯಪುರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.