ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರಿನಲ್ಲಿ ಮಳೆಗೆ ಮನೆಯ ಗೋಡೆ ಕುಸಿದು ಬಾಣಂತಿ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.
ಹೇಮಲತಾ(22) ಮೃತ ರ್ದುದೈವಿ. ಇತ್ತ ಅದೃಷ್ಟವಶಾತ್ ಮಗುವೊಂದು ಪಾರಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ದುರ್ಘಟನೆ ನಡೆದಿದೆ. ಕೆಲವೇ ತಿಂಗಳ ಮಗು ಇದಾಗಿದ್ದು, ಇದೀಗ ತಾಯಿಯ ಆರೈಕೆಯಿಲ್ಲದೆ ಬೆಳೆಯಬೇಕಾಗಿದೆ.