ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಉಗ್ರರ ಎರಡು ಅಡಗುತಾಣ ಭೇದಿಸಿದ ಸೇನಾಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್‌ನಲ್ಲಿ (Poonch) ಸೇನಾಪಡೆ ಉಗ್ರರ ಎರಡು ಅಡಗುತಾಣಗಳನ್ನು ಭೇದಿಸಿದೆ.

ರಟ್ಟಾ ಜಬರ ಅರಣ್ಯದಲ್ಲಿ ಒಂದು ಅಡಗುತಾಣವನ್ನು ಮತ್ತು ಧೋಬಾ ಅರಣ್ಯದಲ್ಲಿ ಇನ್ನೊಂದು ಅಡಗುತಾಣವನ್ನು ಭೇದಿಸಲಾಗಿದೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯಲ್ಲಿ ಎರಡು ಎಕೆ ರೈಫಲ್‌ಗಳು, ಮೂರು ಮ್ಯಾಗಜೀನ್‌ಗಳು ಮತ್ತು 35 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಇದಕ್ಕೂ ಮೊದಲು ಜನವರಿ 15 ರಂದು ಭದ್ರತಾ ಪಡೆಗಳು ಪೂಂಚ್‌ನಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿತ್ತು.

ಸುರನ್‌ಕೋಟೆ ತಹಶಿಲ್‌ನ ಬಹಿಯಾನ್ ವಾಲಿ ಗ್ರಾಮದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಅಡಗುತಾಣವನ್ನು ಭೇದಿಸಲಾಗಿದೆ. ಮೂರು ಎಕೆ ಅಸಾಲ್ಟ್ ರೈಫಲ್‌ಗಳು, 10 ಗ್ರೆನೇಡ್‌ಗಳನ್ನು ಒಳಗೊಂಡ ಬಾಕ್ಸ್, ಗ್ರೆನೇಡ್ ಥ್ರೋವರ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!